ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಮತ್ತು ನಕಲಿ ಪೋಸ್ಟ್:
71 ಜನರ ವಿರುದ್ಧ ಪ್ರಕರಣ ದಾಖಲು
ತ್ರಿಪುರಾ: ರಾಜ್ಯದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದವನ್ನು ಕದಡುವ ಉದ್ದೇಶದಿಂದ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಕಾರಿ ಮತ್ತು ನಕಲಿ ಪೋಸ್ಟ್‌ಗಳನ್ನು ಹಾಕಿದ್ದ ಆರೋಪದ ಮೇಲೆ 71 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಘಟನೆಗಳ ವಿಷಯವಾಗಿ ಪ್ರಚೋದನಕಾರಿ ಮತ್ತು ನಕಲಿ ಪೋಸ್ಟ್‌ಗಳನ್ನು ಹಾಕಿದ್ದ 71 ಜನರ ವಿರುದ್ಧ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತ್ರಿಪುರಾ ಪೊಲೀಸರು ಬುಧವಾರ ತಿಳಿಸಿದ್ದಾರೆ.
ಕೋಮುಗಲಭೆಯ ವದಂತಿಗಳನ್ನು ಹರಡುವ ಮತ್ತು ಸಮಾಜದಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುವವ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ 71 ಜನರ ವಿರುದ್ಧ ಐದು ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ರಾಜ್ಯ ಪೊಲೀಸರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಸಮಾಜದಲ್ಲಿ ದ್ವೇಷ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.




