ಅಳಿಕೆ ವಿದ್ಯಾ ಸಂಸ್ಥೆಗೆ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ
ವಿಟ್ಲ: ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಹಾಜರಾದ 118 ವಿದ್ಯಾರ್ಥಿಗಳಲ್ಲಿ 104 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 14 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಶೇ.100 ಫಲಿತಾಂಶ ದಾಖಲಿಸಿರುತ್ತಾರೆ.
ವಾಣಿಜ್ಯ ವಿಭಾಗಗಳಲ್ಲಿ 64 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಿಸಿರುತ್ತಾರೆ. ಕಲಾ ವಿಭಾಗದಲ್ಲಿ ಹಾಜರಾದ 9 ವಿದ್ಯಾರ್ಥಿಗಳಲ್ಲಿ 3 ವಿಶಿಷ್ಟ ಶ್ರೇಣಿ, 4 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣನಾಗಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಜಯಂತ ಪಿ 595, ವಾಣಿಜ್ಯ ವಿಭಾಗದಲ್ಲಿ ಶ್ರೀಹರಿ ಬಿ 592, ಕಲಾವಿಭಾಗದಲ್ಲಿ ಆಕಾಶ್ ಎಚ್ ಆರ್ ಅವರು 561 ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.




