July 6, 2026

ಅವೈಜ್ಞಾನಿಕ ಪಠ್ಯಪರಿಷ್ಕರಣೆ ವಿರುಧ್ದದ ಹೋರಾಟಕ್ಕೆ ಕ್ಯಾಂಪಸ್ ಫ್ರಂಟ್ ಸಂಪೂರ್ಣ ಬೆಂಬಲ

0
Campus-Front-of-India.jpg

ಅವೈಜ್ಞಾನಿಕ ಮತ್ತು ಅಸಂವಿಧಾನಿಕವಾಗಿ ಹತ್ತನೇ ತರಗತಿಯ ಪಠ್ಯಪರಿಷ್ಕರಣೆ ವಿರೋಧಿಸಿ ಹಾಗೂ ಕುವೆಂಪುರವರಿಗೆ ಅವಮಾನಗೈದ ಪಠ್ಯಪರಿಷ್ಕರಣಾ ಸಮಿತಿಯ ಅಧ್ಯಕ್ಷರಾದ ರೋಹಿತ್ ಚಕ್ರತೀರ್ಥ ವಿರುಧ್ದ ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿಯು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಆಯೋಜಿಸಿದ ಬೃಹತ್ ಪ್ರತಿಭಟನಾ ಸಮಾವೇಶಕ್ಕೆ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿಯು ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದೆ.

ಕನ್ನಡಿಗರನ್ನು ಅವಮಾನಿಸಿ ಅನೇಕ ಸಾಹಿತಿಗಳ ಪಠ್ಯಗಳನ್ನು ಕೈಬಿಟ್ಟು, ಸ್ವಾತಂತ್ರ್ಯ ಹೋರಾಟಗಾರರ ಇತಿಹಾಸವನ್ನು ಮರೆಮಾಚಿ , ದೇಶದ್ರೋಹಿ ಹೆಡ್ಗೆವಾರ್ ಭಾಷಣವನ್ನು ಸೇರ್ಪಡೆಗೊಳಿಸುವ ಮುಖಾಂತರ ಶಿಕ್ಷಣದ ಕೇಸರೀಕರಣಕ್ಕೆ ಮುಂದಾದ ರಾಜ್ಯ ಸರ್ಕಾರದ ಈ ತೀರ್ಮಾನವನ್ನು ರಾಜ್ಯದ ವಿದ್ಯಾರ್ಥಿ ಸಮುದಾಯವು ಖಂಡಿಸಲೇ ಬೇಕು, ಆದ್ದರಿಂದ ಜೂನ್ 18 ರಂದು ಬೆಂಗಳೂರಿನಲ್ಲಿ ನಡೆಯುವ ಈ ಒಂದು ಹೋರಾಟಕ್ಕೆ ಎಲ್ಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಕರೆ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!