July 6, 2026

ಕ್ಯಾಂಟರ್ ಹಾಗೂ ಕಾರು ನಡುವೆ ಭೀಕರ ಅಪಘಾತ:
ತಂದೆ-ಮಗ ಸೇರಿ ಮೂವರು ಮೃತ್ಯು

0
n39672535416556184374337539009cb57db5bccb4cd94de423452b3210b5cfe689c78f143685dbe194d69f.jpg

ಹಾಸನ: ಕ್ಯಾಂಟರ್ ಹಾಗೂ ಮಾರುತಿ-800 ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ವೊಂದು ಸಂಭವಿಸಿದ್ದು, ತಂದೆ ಮಗ ಸೇರಿ ಮೂವರು ಧಾರುಣ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಆಲೂರು ತಾಲ್ಲೂಕಿನ ಆಲೂರು ಈಶ್ವರಹಳ್ಳಿ ಕೂಡಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮುಂಜಾನೆ 4-30 ರ ಸುಮಾರಿನಲ್ಲಿ ಭೀಕರ ಘಟನೆ ನಡೆದಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ತಮಿಳುನಾಡು ಮೂಲದ ಅಂಜನಪ್ಪ (40), ಕಾರ್ತಿಕ್ (17) ಮೃತಪಟ್ಟ ತಂದೆ ಮಗ. ಪುನೀತ್(15), ಕಾರ್ತಿಕ್ (19), ರಾಮಚಂದ್ರ (40)ರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಆಲೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!