February 3, 2026

ಕೆಎಸ್ಆರ್‌ಟಿಸಿ ಬಸ್, ಕಾರ್ ಮಧ್ಯೆ ಅಪಘಾತದಲ್ಲಿ: ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವು

0
image_editor_output_image1309643005-1655703808607.jpg

ತುಮಕೂರು: ಕೆಎಸ್ಆರ್‌ಟಿಸಿ ಬಸ್ ಮತ್ತು ಕಾರ್ ಮಧ್ಯೆ ನಡೆದ ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಚಿಕ್ಕನಾಯಕನಹಳ್ಳಿಯ ಗಿರೀಶ್ (32) ಹಾಗೂ ಮಾನ್ಯ (17) ಎಂದು ಗುರುತಿಸಲಾಗಿದೆ. ರಾಕೇಶ್ (21) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರು ಕಡೆಯಿಂದ ತೆರಳಿದ್ದ ಬಸ್, ತಿಪಟೂರು ಕಡೆಯಿಂದ ಬರುತ್ತಿದ್ದ ಕಾರ್ ಮುಖಾಮುಖಿ ಡಿಕ್ಕಿಯಾಗಿ, ಅಪಘಾತ ಸಂಭವಿಸಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Leave a Reply

Your email address will not be published. Required fields are marked *

error: Content is protected !!