March 25, 2026

ರಸ್ತೆ ಅಪಘಾತ: ಪ್ರೌಢಶಾಲೆಯ ಶಿಕ್ಷಕ ಮೃತ್ಯು

0
image_editor_output_image661954885-1655704395815.jpg

ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯ ಕೋಮಲ್ ಡಾಬಾ ಹತ್ತಿರ ರವಿವಾರ ರಾತ್ರಿ ಬೈಕ್ ಒಂದು ಕಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತೀವ್ರ ಗಾಯಗೊಂಡು ಸಾವು ಬದುಕಿನ ನಡುವೆ ಸಿಲುಕಿದ್ದ ಇಲ್ಲಿನ ವಿವಿವ ಸಂಘದ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಗೌರವ ಕಾರ್ಯದರ್ಶಿ ಮಹೇಶ ಕಿತ್ತೂರ (48) ಚಿಕಿತ್ಸೆ ಫಲಿಸದೆ ರವಿವಾರ ಮಧ್ಯರಾತ್ರಿ ಜೀವ ತ್ಯಜಿಸಿದರು.

ಗಂಭೀರ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರನ್ನು ಬಾಗಲಕೋಟೆಯ ಡಾ.ಕಟ್ಟಿ  ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು.ದೆ. ಮುದ್ದೇಬಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಕುರಿತು ಮುದ್ದೇಬಿಹಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!