February 3, 2026

ಪಡುಬಿದ್ರಿ: ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನ-ದೂರು ದಾಖಲು

0
image_editor_output_image-1935042940-1655704932502.jpg

ಪಡುಬಿದ್ರಿ: ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಛೇರಿಯಲ್ಲಿದ್ದ 20,000 ರೂಪಾಯಿ ಮೌಲ್ಯದ ಎರಡು ಬೆಳ್ಳಿಯ ತಟ್ಟೆಗಳನ್ನು ಕಳ್ಳತನ ಮಾಡಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಳ್ಳರು ಧ್ವಜಸ್ತಂಭದ ಮೇಲೇರಿ ದೇಗುಲದ ಒಳಗೆ ಪ್ರವೇಶಿಸಿದ್ದು, ಹೊರ ಹೋಗುವಾಗ ಪಶ್ಚಿಮದ ಮುಖ್ಯದ್ವಾರ ತೆರೆದುಕೊಂಡು ಹೋಗಿದ್ದಾರೆ. ಶ್ರೀ ಗಣಪತಿ ದೇವರ ಗುಡಿಯ ಒಳಗೆ ಪ್ರವೇಶಿಸಿದ ಕಳ್ಳರು ಗಣಪತಿಯ ಶಿಲಾಮೂರ್ತಿಯ ಮುಖವಾಡಕ್ಕೆ ಇಡಲಾದ ಪಂಚಲೋಹದ ತಗಡು ಹಾಗೂ ಪಾಣಿಪೀಠದ ಕವಚಗಳನ್ನು ತೆಗೆದು ಅಲ್ಲೇ ಬಿಟ್ಟು ಹೋಗಿದ್ದಾರೆ.

ದ್ವಾರದಲ್ಲಿದ್ದ ಎರಡು ಲಾಕರ್‌ ಕಾಣಿಕೆ ಡಬ್ಬಿಯನ್ನು ಒಡೆಯಲು ಯತ್ನಿಸಿದ್ದು ಕಂಡು ಬಂದಿದೆ. ದೇಗುಲದ‌ ಕಚೇರಿಯ ಬೀರುವನ್ನು ಮುರಿದು ಜಾಲಾಡಿದ್ದಾರೆ. ಅಲ್ಲಿಂದ ಎರಡು ಬೆಳ್ಳಿಯ ತಟ್ಟೆಗಳನ್ನು ಕಳವು ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!