ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಬಂಧನ
ಬೆಂಗಳೂರು: ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರುದ್ದ ರೈಲು ನಿಲ್ದಾಣದ ಹೊರಗಡೆ ಸೋಮವಾರ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಎರಡು ಬಾರಿ ಬಂಧನಕ್ಕೊಳಗಾದರು. ನಲಪಾಡ್ ಅವರನ್ನು ಪೂರ್ವ ವಲಯದ ಡಿಸಿಪಿ ಬಂಧಿಸಿ, ತದನಂತರ ಬಿಡುಗಡೆ ಮಾಡಿದರು.
ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿನ 15 ಮಂದಿ ಪ್ರತಿಭಟನಾಕಾರರು ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ್ದಾರೆ. ಅಗ್ನಿಪಥ ಯೋಜನೆ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದ್ದಾರೆ.




