March 24, 2026

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

0
IMG-20220621-WA0000.jpg

ವಿಟ್ಲ: ಯೋಗ ಎಂದರೆ ಅಭ್ಯಾಸ ಮಾಡುವುದು ಎಂದರ್ಥ. ದೇಹ ಮತ್ತು ಮನಸ್ಸುಗಳನ್ನು ಒಂದು ಗೂಡಿಸುವುದು ಯೋಗದ ಮುಖ್ಯ ಉದ್ದೇಶವಾಗಿದೆ ಎಂದು ಜೇಸಿಸ್ ಆಂಗ್ಲಮಾಧ್ಯಮ ಶಾಲೆಯ ಆಡಳಿತಾಧಿಕಾರಿ ರಾಧಾಕೃಷ್ಣ ಎ ಹೇಳಿದರು.

ಇವರು ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ, ‘ಮಾನವೀಯತೆಗಾಗಿ ಯೋಗ ‘ ಎಂಬ ಇಂದಿನ ಯೋಗದಿನದ ಘೋಷ ವಾಕ್ಯದ ಮಹತ್ವವನ್ನು ತಿಳಿಸಿದರು. ಸಭಾಧ್ಯಕ್ಷತೆಯನ್ನು ವಿಠಲ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಮುಗುಳಿ ತಿರುಮಲೇಶ್ವರ ಭಟ್ ವಹಿಸಿದ್ದರು. ಸಭಾ ಕಾರ್ಯಕ್ರಮದ ನಂತರ ಎಲ್ಲಾ ವಿದ್ಯಾರ್ಥಿಗಳು ವಿವಿಧ ಪ್ರಾಯೋಗಿಕ ಯೋಗಾಸನದಲ್ಲಿ ಭಾಗವಹಿಸಿದರು.

ವಿಠಲ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಬಾಬು ಕೊಪ್ಪಳ, ಸದಸ್ಯರಾದ ಪದ್ಮಯ್ಯ ಗೌಡ, ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಶ್ರೀನಿವಾಸ ಗೌಡ ಕಾರ್ಯಕ್ರಮವನ್ನು ಆಯೋಜಿಸಿ ನಿರೂಪಿಸಿದರು. ಪ್ರಾಂಶುಪಾಲರಾದ ಆದರ್ಶ ಚೊಕ್ಕಾಡಿ ಸ್ವಾಗತಿಸಿ, ಉಪನ್ಯಾಸಕರಾದ ಚಂದ್ರಕಾಂತ್ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!