ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ವ್ಯಕ್ತಿ ಸಾವು
ಹರಪನಹಳ್ಳಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ವ್ಯಕ್ತಿಯೊರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ವ್ಯಾಸನತಾಂಡ ಗ್ರಾಮದಲ್ಲಿ ಮಂಗವಾರ ನಡೆದಿದೆ.
ಗಂಗನಾಯ್ಕ್ (32) ಮೃತ ದುರ್ದೈವಿ ಎಂದು ತಿಳಿದುಬಂದಿದೆ.
ಗಂಗನಾಯ್ಕ್ ಎಂದಿನಂತೆ ಬೆಳಿಗ್ಗೆ ಜಮೀನಿಗೆ ತೆರಳಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಆ ಸಂದರ್ಭದಲ್ಲಿ ವಿಷಪೂರಿತ ಹಾವು ಕಚ್ಚಿದೆ. ಕೂಡಲೇ ಸಂಬಂಧಿಕರು ಹರಪನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಕರೆದ್ಯೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಂಗನಾಯ್ಕ್ ಮೃತಪಟ್ಟಿದ್ದಾರೆ.




