ರಾಷ್ಟ್ರಪತಿ ಚುನಾವಣೆಗೆ ಎನ್ ಡಿ ಎ ಅಭ್ಯರ್ಥಿ ಘೋಷಣೆ:
ಆದಿವಾಸಿ ಸಮುದಾಯದ ದ್ರೌಪದಿ ಮುರ್ಮು ಆಯ್ಕೆ
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಕೂಟದ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಆದಿವಾಸಿ ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ. ಈ ಬಾರಿ ಬಿಜೆಪಿ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಿದ ನಾಯಕರು, ಬಳಿಕ ಅಭ್ಯರ್ಥಿ ಘೋಷಿಸಿದ್ದಾರೆ. ಜೆಪಿ ನಡ್ಡಾ ಸುದ್ದಿಗೋಷ್ಠಿಯಲ್ಲಿ ದ್ರೌಪದಿ ಮುರ್ಮು ಎನ್ಡಿಎ ಕೂಟದ ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ.