March 23, 2026

ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ: ಉತ್ತರ ಭಾರತದಲ್ಲಿ 273 ರೈಲುಗಳ ಸಂಚಾರ ರದ್ದು

0
Screenshot_2022-06-22-10-43-04-06_680d03679600f7af0b4c700c6b270fe7.jpg

ಬೆಂಗಳೂರು: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿದಿದ್ದು, ಮಂಗಳವಾರವೂ ಉತ್ತರ ಭಾರತದಲ್ಲಿ 273 ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.

103 ಎಕ್ಸ್‌ಪ್ರೆಸ್ ರೈಲುಗಳು ಮತ್ತು 167 ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ರದ್ದುಪಡಿಸಿರುವುದಾಗಿ ರೈಲ್ವೆ ಇಲಾಖೆ ಹೇಳಿದೆ.

ಪ್ರತಿಭಟನೆಯ ಕಾವು ಕಡಿಮೆಯಾಗಿದ್ದರೂ, ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಪ್ರದೇಶಗಳಲ್ಲಿ ರೈಲುಗಳ ಸಂಚಾರವನ್ನು ತಡೆಹಿಡಿಯಲಾಗಿದೆ. ಮುಂದಿನ ಎರಡು–ಮೂರು ದಿನಗಳಲ್ಲಿ ಎಲ್ಲ ರೈಲುಗಳ ಸಂಚಾರ ಯಥಾಸ್ಥಿತಿಗೆ ಬರಲಿದೆ ಎಂದು ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!