March 23, 2026

ಉಡುಪಿ: ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ, ಅಪರಾಧಿಗೆ ಅಜೀವ ಕಾರಾಗೃಹ ಶಿಕ್ಷೆ, ದಂಡ

0
Screenshot_2022-06-22-10-57-01-76_680d03679600f7af0b4c700c6b270fe7.jpg

ಉಡುಪಿ: ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾಗಿದ್ದು ಹೀಗಾಗಿ ಅಪರಾಧಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಅಜೀವ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ರಾಜೀಬ್ ಅಲಿಯಾಸ್ ಚೋಟು (20) ಶಿಕ್ಷೆಗೆ ಗುರಿಯಾದ ಆರೋಪಿ.

2018ರ ಪೆಬ್ರವರಿ ತಿಂಗಳಿನಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ರಸ್ತೆ ಕೆಲಸಕ್ಕೆ ಬಂದಿದ್ದ ರಾಜೀಬ್ 14 ವರ್ಷದ ಪ್ರಾಯದ ಬಾಲಕಿಯನ್ನು ಮನೆಯಿಂದ ಅಪಹರಿಸಿದ್ದನು.

ಮಗಳು ಕಾಣೆಯಾದ ಬಗ್ಗೆ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಅಪ್ರಾಪ್ತೆಯನ್ನು ರೈಲು ನಿಲ್ದಾಣವೊಂದರಲ್ಲಿ ಪತ್ತೆ ಮಾಡಿ ಪೊಲೀಸರು ಕರೆ ತಂದಿದ್ದರು. ಆಪ್ತ ಸಮಾಲೋಚನೆ ವೇಳೆ ಬಾಲಕಿಯು ರಾಜೀಬ್ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಗ್ಗೆ ಹಾಗೂ ಇತರ ಐವರ ವಿರುದ್ಧ ಮಾಹಿತಿ ನೀಡಿದ ಆಧಾರದಲ್ಲಿ ಎಲ್ಲರನ್ನು ಬಂಧಿಸಲಾಗಿತ್ತು

Leave a Reply

Your email address will not be published. Required fields are marked *

error: Content is protected !!