November 22, 2024

ಅಫ್ಘಾನಿಸ್ತಾನದಲ್ಲಿ ಭಯಾನಕ ಭೂಕಂಪನ: ಕನಿಷ್ಠ 155 ಮಂದಿ ಮೃತ್ಯು, ರಿಕ್ಟರ್ ಮಾಪಕದಲ್ಲಿ 6.1ರ ತೀವ್ರತೆಯಲ್ಲಿ ಕಂಪಿಸಿದ ಭೂಮಿ

0

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಬುಧವಾರ ಸಂಭವಿಸಿದ ಭಯಾನಕ ಭೂಕಂಪನದಲ್ಲಿ ಕನಿಷ್ಠ 155 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ದೇಶದ ಪೂರ್ವ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ 6.1ರ ತೀವ್ರತೆಯಲ್ಲಿ ಭೂಮಿ ಕಂಪಿಸಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕ್ಟಿಕಾ ಪ್ರಾಂತ್ಯದಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿವೆ. ಈ ಭಾಗದಲ್ಲಿ ಕನಿಷ್ಠ 100 ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ತಾಲಿಬಾನ್ ಆಡಳಿತದಲ್ಲಿನ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಸೀಮ್ ಹಕ್ಕಾನಿ ತಿಳಿಸಿದ್ದಾರೆ. ಸಾವಿನ ಸಂಖ್ಯೆ 250ಕ್ಕೂ ಹೆಚ್ಚಿದ್ದು, ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಬಿಬಿಸಿ ವರದಿ ಮಾಡಿದೆ.

ಪೂರ್ವದ ಪ್ರಾಂತ್ಯಗಳಾದ ನಂಗರ್ಹಾರ್ ಮತ್ತು ಖೋಸ್ಟ್‌ಗಳಲ್ಲಿ ಕೂಡ ಅಪಾರ ಪ್ರಮಾಣದ ಸಾವು ನೋವುಗಳು ವರದಿಯಾಗಿವೆ. ಆಗ್ನೇಯ ಭಾಗದ ನಗರ ಖೋಸ್ಟ್‌ನಿಂದ ಸುಮಾರು 44 ಕಿಮೀ ದೂರದಲ್ಲಿ ಹಾಗೂ 51 ಕಿಮೀ ಆಳದಲ್ಲಿ ಭೂಕಂಪನ ಉಂಟಾಗಿದೆ.

ಖೋಸ್ಟ್‌ನಲ್ಲಿ ಕನಿಷ್ಠ 25 ಮಂದಿ ಬಲಿಯಾಗಿದ್ದಾರೆ. ನಂಗರ್ಹಾರ್ ಪ್ರಾಂತ್ಯದಲ್ಲಿ ಕೂಡ ಐವರು ಮೃತಪಟ್ಟಿರುವುದು ವರದಿಯಾಗಿದೆ. ಅಪಾರ ಪ್ರಮಾಣದ ಕಟ್ಟಡಗಳು ಧರೆಗುರುಳಿವೆ.

Leave a Reply

Your email address will not be published. Required fields are marked *

error: Content is protected !!