May 16, 2026

ಕಾಸರಗೋಡು: ಟ್ಯಾಂಕರ್ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ:
ಓರ್ವ ಮೃತ್ಯು

0
accident.jpg

ಕಾಸರಗೋಡು: ಟ್ಯಾಂಕರ್ ಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ವಿದ್ಯಾನಗರದಲ್ಲಿರುವ ಸರ್ಕಾರಿ ಕಾಲೇಜು ಬಳಿ ನಡೆದಿದೆ.

ಚಾಲಕ್ಕುಡಿಯ ಎ .ಪಿ ಬಿನೀಶ್ ( 45) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಅವರ ಜೊತೆಗಿದ್ದ ತಮಿಳುನಾಡಿನ ಆನಂದ್ ಕುಮಾರ್ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆನಂದ್ ಕುಮಾರ್ ಚಲಾಯಿಸುತ್ತಿದ್ದ ಬೈಕ್ ಹಾಗೂ ಟ್ಯಾಂಕರ್ ನಡುವೆ ಅಪಘಾತ, ನಡೆದಿದ್ದು ರಸ್ತೆಗೆ ಎಸೆಯಲ್ಪಟ್ಟ ಬಿನೀಶ್ ತೀವ್ರ ಸ್ವರೂಪದ ಗಾಯಗೊಂಡಿದ್ದು, ಅವರನ್ನು ಕಾಸರಗೋಡು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!