March 21, 2026

ಕಡಬ: ಹಲವು ವಿದ್ಯಾರ್ಥಿಗಳಲ್ಲಿ ಸಾಂಕ್ರಾಮಿಕ ರೋಗ ಪತ್ತೆ ಹಿನ್ನೆಲೆ: ಒಂದು ವಾರ ಶಾಲೆ ರಜೆ

0
school-closed.png

ಕಡಬ: ಇಲ್ಲಿನ ಖಾಸಗಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ರೋಗ ಹರಡಿರುವುದರಿಂದ ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಭೇಟಿ ನೀಡಿದ್ದು, ಈಗಾಗಲೇ ಶಾಲೆಗೆ ಒಂದು ವಾರಗಳ ಕಾಲ ರಜೆ ನೀಡಲಾಗಿದೆ.

ಇತ್ತೀಚೆಗೆ ಕೆಲ ದಿನಗಳ ಹಿಂದೆ ಕೆಲವು ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಈ ರೋಗವು ಇದೀಗ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹರಡಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್.ಬಿ, ಕಡಬ ಖಾಸಗಿ ವಿದ್ಯಾಸಂಸ್ಥೆಯ ಸುಮಾರು 40 ರಷ್ಟು ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ತಗುಲಿರುವ ಕುರಿತ ಮಾಹಿತಿಯನ್ನು ತಾಲೂಕು ಆರೋಗ್ಯಾಧಿಕಾರಿಗಳಿಂದ ಪಡೆದುಕೊಂಡಿದ್ದೇನೆ. ಇದು ಸೂಕ್ಷ್ಮ ವಿಚಾರ ಹಾಗೂ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದರಿಂದ ಮುಂಜಾಗ್ರತಾ ಕ್ರಮವಾಗಿ ಒಂದು ವಾರಗಳ ಕಾಲ ಶಾಲೆಗೆ ರಜೆ ನೀಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!