May 11, 2026

ಸಿದ್ದರಾಮಯ್ಯ ರಾಜ್ಯದ ಯಾವ ಮೂಲೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದರೂ ಸೋಲಿಸುತ್ತೇವೆ: ಸಚಿವ ಕೆ.ಎಸ್‌.ಈಶ್ವರಪ್ಪ

0
image_editor_output_image-1041785662-1636014523635.jpg

ಚಿತ್ರದುರ್ಗ: ಸಿದ್ದರಾಮಯ್ಯ ಅವರು ರಾಜ್ಯದ ಯಾವ ಮೂಲೆಯಲ್ಲಿ ಚುನಾವಣೆಗೆ ಸ್ಪರ್ಧಿಸಿದರೂ ಸೋಲಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಾನಗಲ್‌ ವಿಧಾನಸಭಾ ಕ್ಷೇತ್ರ ಗೆದ್ದ ಕಾಂಗ್ರೆಸ್‌, ಇಡೀ ದೇಶವನ್ನು ಗೆದ್ದಿರುವಂತೆ ಬೀಗುತ್ತಿದೆ. ಕಾಂಗ್ರೆಸ್, ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ನೋಡಿ ಜನ‌ ಮತ ನೀಡಿಲ್ಲ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಜಿರೋನಾ ಅಥವಾ ಹಿರೋನಾ ಎಂಬುದು ಗೊತ್ತಾಗಿದೆ” ಎಂದರು.

ಇನ್ನು ದೇಶದಲ್ಲಿ ಕಾಂಗ್ರೆಸ್‌ ಈಗಾಗಲೇ ಪ್ರಾದೇಶಿಕ ಪಕ್ಷದಂತೆ ಆಗಿದ್ದು, ತಮಿಳುನಾಡು, ಕೇರಳ, ತೆಲಂಗಾಣ ಸೇರಿ ಹಲವು ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಅಸ್ತಿತ್ವವಿಲ್ಲ. ಕರ್ನಾಟಕದಲ್ಲಿ ಒಂಚೂರು ಜೀವ ಹಿಡಿದುಕೊಂಡಿದೆ ಎಂದಿದ್ದಾರೆ.

“ಸಿದ್ದರಾಮಯ್ಯ ಅವರು ಮಾತನಾಡುವಾಗ ನಾಲಿಗೆ ಬಿಗಿ ಹಿಡಿದುಕೊಳ್ಳಬೇಕು. ದಲಿತರ ಬಗೆಗೆ ಆಡಿದ ಮಾತಿಗೆ ತಕ್ಷಣ ಕ್ಷಮೆ ಕೇಳಬೇಕು” ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!