ತೀರ್ಥಯಾತ್ರಯಿಂದ ಹಿಂದೆ ಬರುತ್ತಿದ್ದಾಗ ರಸ್ತೆ ಅಪಘಾತ: 10 ಮಂದಿ ಮೃತ್ಯು, 7 ಮಂದಿಗೆ ಗಾಯ
ಲಕ್ನೋ: ತೀರ್ಥಯಾತ್ರಯಿಂದ ಹಿಂದೆ ಬರುತ್ತಿದ್ದ ಭಕ್ತರಿದ್ದ ಟ್ರಕ್ಕೊಂದು ಮರಕ್ಕೆ ಗುದ್ದಿದ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಫಿಲಿಭಿಟ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ.
ಭಕ್ತರು ಟ್ರಕ್ ನಲ್ಲಿ ಹರಿದ್ವಾರದಿಂದ ಲಖೀಂಪುರಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.
ಇಂದು ಮುಂಜಾನೆ ಸುಮಾರು 4.30ರ ಸುಮಾರಿಗೆ ಈ ಘಟನೆ ನಡೆದಿದೆ. ಹತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಗೊಂಡ ಐವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಬರೇಲಿ ಆಸ್ಪತ್ರೆಗೆ ಸೇರಿಸಲಾಗಿದೆ.




