March 20, 2026

ಅಯೋಧ್ಯೆಯ ಸರಯೂ ನದಿಯಲ್ಲಿ ಪತ್ನಿಯೊಂದಿಗೆ ಸ್ನಾನ ಮಾಡುತ್ತಿದ್ದ ಪತಿಗೆ ಹಲ್ಲೆ

0
image_editor_output_image1424311183-1655966581629.jpg

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿನ ಸರಯೂ ನದಿಯಲ್ಲಿ ಪತ್ನಿಯೊಂದಿಗೆ ಸ್ನಾನ ಮಾಡುತ್ತಿದ್ದ ಪತಿಯನ್ನು ನೈತಿಕ ಪೊಲೀಸ್ ಗಿರಿಯ ನಿರ್ದೇಶನದಂತೆ ಗುಂಪೊಂದು ಥಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಮಂಗಳವಾರ ರಾಮ್ ಕಿ ಪೌದಿ ಘಾಟ್ ಬಳಿ ಈ ಘಟನೆ ನಡೆದಿರುವುದಾಗಿ ಕೆಲ ಜನರು ಹೇಳುತ್ತಿದ್ದರೂ ಈ ಘಟನೆ ಯಾವಾಗ ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಇಲ್ಲಿಯವರೆಗೂ ಯಾವುದೇ ದೂರು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಆದಾಗ್ಯೂ, ಈ ವಿಚಾರದ ಬಗ್ಗೆ ತನಿಖೆ ಕೈಗೊಳ್ಳಲಾಗಿದ್ದು, ದಂಪತಿ ಹಾಗೂ ಅವರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಪತ್ತೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧೀಕ್ಷಕರ ಶೈಲೇಶ್ ಪಾಂಡೆ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!