ಯಮಲೂರಿನ ಅಪಾರ್ಟ್‌ಮೆಂಟ್‌ನಲ್ಲಿ ಕಲುಷಿತ ನೀರು ಕುಡಿದು 200 ಮಕ್ಕಳು ಅಸ್ವಸ್ಥ
ಬೆಂಗಳೂರು: ಯಮಲೂರಿನ ಅಪಾರ್ಟ್‌ಮೆಂಟ್‌ನಲ್ಲಿ ಕಲುಷಿತ ನೀರು ಕುಡಿದು ಒಂದು ವರ್ಷದೊಳಗಿನ ಮಕ್ಕಳು ಸೇರಿದಂತೆ ಸುಮಾರು 200 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಬಿಲ್ಡರ್ ಪ್ರೆಸ್ಟೀಜ್ ಗ್ರೂಪ್ ತಮ್ಮ ಕುಂದುಕೊರತೆಗಳನ್ನು ಕೂಡಲೇ ಪರಿಹರಿಸಬೇಕೆಂದು ಪ್ರೆಸ್ಟೀಜ್ ಕ್ಯೂ ಗಾರ್ಡನ್ಸ್ ಅಪಾರ್ಟ್‌ಮೆಂಟ್ ನಿವಾಸಿಗಳು ಒತ್ತಾಯಿಸಿದ್ದಾರೆ.
ಸುತ್ತಮುತ್ತಲಿನ ಅನೇಕ ಅಪಾರ್ಟ್ ಮೆಂಟ್ ಸಂಕೀರ್ಣಗಳಲ್ಲಿ ಅಂತರ್ಜಲ ಕಲುಷಿತಗೊಂಡಿರುವುದು ಅತ್ಯಂತ ಆತಂಕಕಾರಿಯಾಗಿದೆ ಎಂದು ಬೆಳ್ಳಂದೂರು ಮತ್ತು ವರ್ತೂರು ಕೆರೆಗಳ ಸುತ್ತಮುತ್ತಲಿನ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ಹೇಳಿವೆ.
ಅಕ್ಟೋಬರ್ 22 ರಂದು ಸುಮಾರು 100 ಮಕ್ಕಳು ಮತ್ತು ವಯಸ್ಕರಲ್ಲಿ ಹೊಟ್ಟೆ ನೋವು ಮತ್ತು ಅಸ್ವಸ್ಥತೆ ಕಾಣಿಸಿಕೊಂಡು ಅನಾರೋಗ್ಯಕ್ಕೆ ಒಳಗಾದ ನಂತರ ಈ ವಿಷಯ ಬೆಳಕಿಗೆ ಬಂದಿತು. ಅಕ್ಟೋಬರ್ 23ರ ಹೊತ್ತಿಗೆ ಸುಮಾರು 200ಕ್ಕೆ ಹೆಚ್ಚು ಮಕ್ಕಳು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಪ್ರೆಸ್ಟೀಜ್ ಕ್ಯೂ ನಿವಾಸಿ ಮನೀಶ್ ಸಿಂಗ್ ಅವರು ತಿಳಿಸಿದ್ದಾರೆ.





