March 20, 2026

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಲಾರಿ ಢಿಕ್ಕಿ

0
image_editor_output_image-568380666-1655973775776.jpg

ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ನಡುವಿನ ಡಿವೈಡರ್‌ ಮೇಲೆ ಪಲ್ಟಿಯಾದ ಘಟನೆ ಕೊಪ್ಪಲಂಗಡಿಯಲ್ಲಿ ನಡೆದಿದೆ.

ಡಿವೈಡರ್‌ ಮೇಲೆ ಉರುಳಿ ಬಿದ್ದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿದ್ದು, ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!