March 19, 2026

ಮಂಗಳೂರು: ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ: ಇಬ್ಬರು ಮಕ್ಕಳು ಮೃತ್ಯು

0
image_editor_output_image1443230632-1655996864180

ಮಂಗಳೂರು: ತಂದೆಯೋರ್ವ ತನ್ನ ಮೂವರು ಮಕ್ಕಳು ಹಾಗೂ ಪತ್ನಿಯನ್ನು ಬಾವಿಗೆ ತಳ್ಳಿ ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.

ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪ ಹೊಕಾವೇರಿಯಲ್ಲಿ ಈ ಘಟನೆ ನಡೆದಿದೆ.
ಸಣ್ಣ ಅಂಗಡಿ ನಡೆಸುತ್ತಿದ್ದ ಹಿತೇಶ್(35) ಎಂಬವರು ಇಂದು ಸಂಜೆ ನನ್ನ ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಹೆಣ್ಣು ಮಗು ಹಾಗೂ ಪತ್ನಿ ರಶ್ಮಿಯನ್ನು ಬಾವಿಗೆ ತಳ್ಳಿ ತಾನು ಕೂಡ ಬಾವಿಗೆ ಹಾರಿದ್ದಾನೆ. ವಿಷಯ ತಿಳಿದ ಸ್ಥಳೀಯರು ತಕ್ಷಣ ಕಾರ್ಯಾಚರಣೆ ನಡೆಸಿ ಎಲ್ಲರನ್ನೂ ಬಾವಿಯಿಂದ ಮೇಲಕ್ಕೆತ್ತಿದ್ದಾರೆ ಆದರೆ ಈ ವೇಳೆ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು ಒಂದು ಮಗು ಬದುಕುಳಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ . ಕೌಟುಂಬಿಕ ಕಲಹವೇ ಕಾರಣ ಎಂದು ಶಂಕಿಸಲಾಗಿದೆ.

ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸುತ್ತಿದ್ದೇವೆ.

Leave a Reply

Your email address will not be published. Required fields are marked *

error: Content is protected !!