November 22, 2024

ಪ್ರಧಾನಿ ಭೇಟಿಯ ವೇಳೆ 6 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ಒಂದೇ ದಿನದಲ್ಲಿ ಕುಸಿತ

0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭೇಟಿಗಾಗಿ ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಿದ ₹6 ಕೋಟಿ ವೆಚ್ಚದ ರಸ್ತೆ ಮೂರೇ ದಿನದಲ್ಲಿ ಕಿತ್ತುಹೋಗಿದೆ. ಈ ಬಗ್ಗೆ ಸಮಗ್ರ ವರದಿ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ಪ್ರಧಾನಿ ಕಚೇರಿ ಗುರುವಾರ ಸಂಜೆ ನಿರ್ದೇಶನ ನೀಡಿದೆ.

₹33 ಸಾವಿರ ಕೋಟಿ ಮೊತ್ತದ ಕಾಮಗಾರಿಗಳ ಉದ್ಘಾಟನೆಗಾಗಿ ಜೂನ್‌ 20ರಂದು ಪ್ರಧಾನಿ ಅವರು ಬೆಂಗಳೂರಿಗೆ ಬಂದಿದ್ದರು. ಪ್ರಧಾನಿ ಸಾಗುವ ರಸ್ತೆ ಅಭಿವೃದ್ಧಿಗಾಗಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ₹24 ಕೋಟಿ ವೆಚ್ಚ ಮಾಡಿತ್ತು. ಜ್ಞಾನಭಾರತಿಯ ಡಾ.ಬಿ.ಆರ್. ಅಂಬೇಡ್ಕರ್‌ ಸ್ಕೂಲ್ ಆಫ್‌ ಎಕಾನಮಿಕ್ಸ್‌ (ಬೇಸ್‌) ಕ್ಯಾಂಪಸ್‌ ಬಳಿ ₹6 ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗಿತ್ತು. ಆ ರಸ್ತೆ ಒಂದೇ ದಿನದಲ್ಲಿ ಕುಸಿದುಹೋಗಿದೆ.

‘ಪ್ರಧಾನಿ ಸಾಗಿದ ರಸ್ತೆಯ ಸ್ಥಿತಿ ನೋಡಿ. ಇದು ಬಿಬಿಎಂಪಿಯ ಕಳಪೆ ಕಾಮಗಾರಿಗೆ ಸಾಕ್ಷಿ. ಶೇ 40 ಭ್ರಷ್ಟಾಚಾರಕ್ಕೆ ಮತ್ತೊಂದು ಉದಾಹರಣೆ’ ಎಂದು ಕುಸಿದ ರಸ್ತೆಯ ಚಿತ್ರವನ್ನು ಟ್ಯಾಗ್‌ ಮಾಡಿದ್ದ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸಿದ್ದರು. ಈ ಬಗ್ಗೆ ಪ್ರಧಾನಿ ಸಚಿವಾಲಯಕ್ಕೆ ಮಾಹಿತಿ ಹೋಗಿತ್ತು.

Leave a Reply

Your email address will not be published. Required fields are marked *

error: Content is protected !!