ಗುಜರಾತ್ ಗಲಭೆ ಪ್ರಕರಣ: ಪ್ರಧಾನಿ ನರೇಂದ್ರ ಮೋದಿಗೆ ಕ್ಲೀನ್ ಚಿಟ್: ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ:ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ (ಜೂನ್ 23) ವಜಾಗೊಳಿಸಿದೆ.
2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ 63 ಮಂದಿಗೆ ವಿಶೇಷ ತನಿಖಾ ತಂಡ (ಎಸ್ ಐಟಿ) ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದ ಕಾಂಗ್ರೆಸ್ ಮುಖಂಡ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
2002ರ ಫೆಬ್ರವರಿ 28ರಂದು ಅಹಮಹಾಬಾದ್ ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಹಿಂಸಾಚಾರದಲ್ಲಿ ಎಹ್ಸಾನ್ ಜಾಫ್ರಿ ಸಾವನ್ನಪ್ಪಿದ್ದರು. ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.