March 19, 2026

ಮಂಗಳೂರು: ಪೊಲೀಸ್ ಇಲಾಖೆ ಹಾಗೂ ಅಭಿಯೋಜನಾ ಇಲಾಖಾಧಿಕಾರಿಗಳೊಂದಿಗೆ ಸಮನ್ವಯ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ

0
IMG-20220624-WA0008.jpg

ಮ‌ಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪೋಲಿಸ್ ಇಲಾಖೆ ಹಾಗೂ ಅಭಿ ಯೋಜನಾ ಇಲಾಖೆ ಅಧಿಕಾರಿ ಗಳ ಸಮನ್ವಯ ಸಭೆ ಇಂದು ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ ವಹಿಸಿದ್ದರು.
ವೇದಿಕೆಯಲ್ಲಿ ಮಂಗಳೂರು ವಲಯ ಅಭಿಯೋಜನೆ ಇಲಾಖೆಯ ಹಿರಿಯ ಕಾನೂನು ಅಧಿಕಾರಿ ಶಿವಪ್ರಸಾದ್ ಆಳ್ವ ಕೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ ಚಂದ್ರ, ಜಿಲ್ಲಾ ಪ್ರಧಾನ ಸರಕಾರಿ ಅಭಿಯೋಜಕರು ರಾಜು ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಪೊಲೀಸ್ ಇಲಾಖೆ ಹಾಗೂ ಅಭಿಯೋಜಕರ ಇಲಾಖೆಯ ಅಧಿಕಾರಿಗಳ ಸಮಾಲೋಚನಾ ಸಭೆ ನಡೆದು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ ಕಲೆಹಾಕುವ ಮತ್ತು ದಾಖಲೆಗಳ ಸಂಗ್ರಹದ ಕುರಿತು ಮಾತುಕತೆ ನಡೆಯಿತು.
ನಂತರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ವಿವಿಧ ತಾಲ್ಲೂಕುಗಳ ನ್ಯಾಯಾಲಯಗಳಲ್ಲಿ ಸರ್ಕಾರದ ಪರವಾಗಿ ವಾದಿಸಿ ಪ್ರಕರಣಗಳಲ್ಲಿ ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದ ಸರಕಾರಿ ಸಹಾಯಕ ಅಭಿಯೋಜಕ ರಿಗೆ, ಮತ್ತು ಸರಕಾರಿ ಅಭಿಯೋಜಕ ರಿಗೆ ಸನ್ಮಾನ ಪತ್ರ ವಿತರಿಸುವ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

error: Content is protected !!