June 12, 2026

ವಿಟ್ಲ: ಅಕ್ರಮ ಗೋ ಸಾಗಾಟ; ಆರೋಪಿ ವಶಕ್ಕೆ

0
image_editor_output_image389579570-1656124439094

ವಿಟ್ಲ : ಅಕ್ರಮ ಗೋ ಸಾಗಾಟದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಪಿಕಪ್ ಸಹಿತ ಓರ್ವನನ್ನು ವಶಕ್ಕೆ ಪಡೆದ ಘಟನೆ ಮಾಣಿಯಲ್ಲಿ ನಡೆದಿದೆ.

ಇರಾಮೂಲೆ ನಿವಾಸಿ ಮಹಮ್ಮದ್ ಬಂಧಿತ ಅರೋಪಿ. ಹಮೀದ್, ಮತ್ತು ಪವನ್ ರಾಜ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಯಿಂದ ಪಿಕಪ್ ವಾಹನ ಹಾಗೂ ದನಗಳನ್ನು ವಶಕ್ಕೆ ಪಡೆದಿದ್ದಾರೆ ಮತ್ತು ಕೃತ್ಯದಲ್ಲಿ ಭಾಗಿಯಾಗಿರುವ ಹಮೀದ್ ಮತ್ತು ಪವನ್ ರಾಜ ನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ದನಗಳನ್ನು ವದೆ ಮಾಡಿ ಮಾಂಸವನ್ನು ಕೇರಳಕ್ಕೆ ಸಾಗಾಟ ಮಾಡುವ ಉದ್ದೇಶದಿಂದ ದನಗಳನ್ನು ಕೊಂಡೊಯ್ಯುತ್ತಿದ್ದರು ತನಿಖೆ ವೇಳೆ ತಿಳಿದು ಬಂದಿದೆ.

ದನ ಸಾಗಾಟ ಮಾಡುತ್ತಿದ್ದ ಪಿಕಪ್‌ ಚಾಲಕ ಮೊಹಮ್ಮದ್‌ ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡಿ ಕೇರಳಕ್ಕೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಪವನ್‌ ರಾಜ ಎಂಬವರ ಮನೆಗೆ ಕೊಂಡು ಹೋಗುವಂತೆ ಹಮೀದ್‌ ಎಂಬಾತನು ಎಲ್ಲಿಂದಲೋ ಜಾನುವಾರುಗಳನ್ನು ಖರೀದಿಸಿ ಪಿಕಪ್‌ ವಾಹನಕ್ಕೆ ತುಂಬಿಸಿ ಕಳುಹಿಸಿಕೊಟ್ಟಿದ್ದು, ಬಂಟ್ವಾಳ ತಾಲೂಕು ಇರಾ ಗ್ರಾಮದ ಪವನ್‌ ರಾಜ್‌ ಎಂಬವರ ಮನೆಗೆ ಸಾಗಾಟ ಮಾಡುತ್ತಿರುವುದಾಗಿದೆ ಎಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!