ರಾಹುಲ್ ಗಾಂಧಿಯವರ ಕಚೇರಿ ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ: ಪಿಣರಾಯಿ ವಿಜಯನ್
ವಯನಾಡ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಚೇರಿ ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಈ ಘಟನೆಯ ಹಿಂದೆ ಆಡಳಿತಾರೂಢ ಸಿಪಿಐಎಂ ಪಕ್ಷದ ವಿದ್ಯಾರ್ಥಿ ಸಂಘಟನೆಯಾಗಿರುವ ಎಸ್‌ಎಫ್‌ಐ ಕೈವಾಡವಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಇದೀಗ ಈ ಘಟನೆಯ ಕುರಿತು ಖಂಡನೆ ವ್ಯಕ್ತಪಡಿಸಿರುವ ಕೇರಳ ಸಿಎಂ ಪಿಣರಾಯಿ ವಿಜಯನ್ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
“ರಾಹುಲ್ ಗಾಂಧಿಯವರ ಕಚೇರಿ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ನಮ್ಮ ದೇಶದಲ್ಲಿ, ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಮತ್ತು ಪ್ರಜಾಸತ್ತಾತ್ಮಕವಾಗಿ ಪ್ರತಿಭಟಿಸಲು ಹಕ್ಕಿದೆ. ಆದರೂ, ಇದು ಮಿತಿಮೀರಿರಬಾರದು. ಅದೊಂದು ತಪ್ಪು ಪ್ರವೃತ್ತಿವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.