ವಿಟ್ಲ: ಪೋಷಕರ ಸಮಾವೇಶ ಮತ್ತು ಗೌರವಾರ್ಪಣಾ ಸಮಾರಂಭ
ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್ ವಿಟ್ಲ ವತಿಯಿಂದ ಜೆ.ಎಲ್ ಆಡಿಟೋರಿಯಂ ಸಭಾಂಗಣದಲ್ಲಿ ಪೋಷಕರ ಸಮಾವೇಶ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಇಕ್ಬಾಲ್ ಹೋನೆಸ್ಟ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಖ್ಯಾತ ಟ್ರೈನರ್ ಸ್ವದಖತುಲ್ಲಾ ಫೈಝಿ ಭಾಗವಹಿಸಿದ್ದರು. SSLC ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಮತ್ತು 100% ಫಲಿತಾಂಶದ ಸಾಧನೆಗಾಗಿ ಶ್ರಮಿಸಿದ ಶಿಕ್ಷಕರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾಡಳಿತ ಮಂಡಳಿಯ ಪದಾಧಿಕಾರಿಗಳು, ಟ್ರಸ್ಟೀ ಸದಸ್ಯರು, ವಿಟ್ಲ ಜಮಾಅತ್ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು ಸೇರಿದಂತೆ ಇತರ ಗಣ್ಯರು ಭಾಗವಹಿಸಿದ್ದರು.





