ಹಿಮಾಲಯ ಪರ್ವತದ ಚಾರಣಕ್ಕೆಂದು ಒಂಟಿಯಾಗಿ ಹೋಗಿದ್ದ ಮಣಿಪಾಲ್ ಆಸ್ಪತ್ರೆ ವೈದ್ಯ ನಾಪತ್ತೆ
ಬೆಂಗಳೂರು: ಹಿಮಾಲಯ ಪರ್ವತದ ಚಾರಣಕ್ಕೆಂದು ಒಂಟಿಯಾಗಿ ನೇಪಾಳಕ್ಕೆ ಹೋಗಿದ್ದ ಮಣಿಪಾಲ್ ಆಸ್ಪತ್ರೆ ವೈದ್ಯ ಡಾ. ಎಸ್. ಚಂದ್ರಮೋಹನ್ (31) ಅನುಮಾನಾಸ್ಪದ ರೀತಿಯಲ್ಲಿ ನಾಪತ್ತೆಯಾಗಿದ್ದು, ಈ ಬಗ್ಗೆ ನಗರದ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ವಸಂತನಗರ ನಿವಾಸಿ ಚಂದ್ರಮೋಹನ್, ಸರ್ಜಾಪುರ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆ ಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅವರು ನಾಪತ್ತೆಯಾದ ಬಗ್ಗೆ ತಂದೆ ಶಿವನಾಥ್ ದೂರು ನೀಡಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದು ವರಿಸಲಾಗಿದೆ’ ಎಂದು ಪೊಲೀಸ್
ಅಧಿಕಾರಿಯೊಬ್ಬರು ಹೇಳಿದರು.
‘ಹಿರಿಯ ಅಧಿಕಾರಿಗಳ ಮೂಲಕ ನೇಪಾಳ ಪೊಲೀಸರನ್ನು ಸಂಪರ್ಕಿಸಿ, ಮಾಹಿತಿ ರವಾನಿಸಲಾಗಿದೆ. ಸ್ಥಳೀಯ ಪೊಲೀಸರು ಚಂದ್ರಮೋಹನ್ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪೋಷಕರು ಹಾಗೂ ಸಹೋದರ ಸಹ ನೇಪಾಳಕ್ಕೆ ಹೋಗಿದ್ದಾರೆ. ಅಗತ್ಯವಿದ್ದರೆ ಬೆಂಗಳೂರಿನಿಂದ ಪೊಲೀಸರ ತಂಡ ಕಳುಹಿಸಲಾಗುವುದು’ ಎಂದು ತಿಳಿಸಿದರು.





