March 19, 2026

ಮಲ್ಪೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ರಕ್ಷಣೆ

0
Screenshot_2022-06-27-10-57-39-35_680d03679600f7af0b4c700c6b270fe7.jpg

ಮಲ್ಪೆ: ಮಲ್ಪೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯೊಬ್ಬರನ್ನು ಲೈಫ್‌ಗಾರ್ಡ್ ತಂಡ ರಕ್ಷಿಸಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಪುಣೆ ಮೂಲದ ೪೫ ವರ್ಷದ ಮಹಿಳೆಯೊಬ್ಬರು ಮಗನೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದು, ಅಲ್ಲಿ ಆತ್ಮಹತ್ಯೆ ಮಾಡುವ ಉದ್ದೇಶದಿಂದ ಆ ಮಹಿಳೆ ಸಮುದ್ರದ ನೀರಿನತ್ತ ಓಡುತ್ತಿದ್ದರೆನ್ನಲಾಗಿದೆ.

ಇದನ್ನು ಸ್ಥಳದಲ್ಲಿದ್ದ ಜೀವರಕ್ಷಕ ದಳದವರು ಗಮನಿಸಿದ್ದು, ತಕ್ಷಣವೇ ಆ ಮಹಿಳೆಯನ್ನು ರಕ್ಷಿಸಿ ತೀರಕ್ಕೆ ಕರೆತಂದರು. ಆದರೆ ಮತ್ತೆ ಅದೇ ಪ್ರಯತ್ನ ಮುಂದುವರಿಸಿದಾಗ ಜೀವರಕ್ಷಕ ತಂಡದವರು ಮಗನನ್ನು ಮತ್ತು ಮಹಿಳೆಯನ್ನು ಮಲ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!