ಜು.1ರಿಂದ ದೇಶಾದ್ಯಂತ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳು ನಿಷೇಧ
ಬೆಂಗಳೂರು: ದೇಶಾದ್ಯಂತ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳು ಜು. 1ರಿಂದ ನಿಷೇಧಗೊಳ್ಳಲಿವೆ. ಅವುಗಳ ಉತ್ಪಾದನೆ, ವಿತರಣೆ, ಆಮದು, ಮಾರಾಟ, ದಾಸ್ತಾನು ಮತ್ತು ಬಳಕೆಯನ್ನು ನಿರ್ಬಂಧಿಸ ಲಾಗಿದೆ.
ನಿಯಮ ಉಲ್ಲಂಘಿಸಿದವರಿಗೆ 5 ವರ್ಷಗಳ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ ಅಥವಾ ಎರಡನ್ನೂ ವಿಧಿಸುವುದಾಗಿ ಸರಕಾರ ಎಚ್ಚರಿಸಿದೆ.
ಕರ್ನಾಟಕ ಸರಕಾರವು 5 ವರ್ಷಗಳ ಹಿಂದೆಯೇ ಏಕಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಬಳಕೆಗೆ ನಿಷೇಧ ಹೇರಿತ್ತು. ಆದರೆ ಅದಿನ್ನೂ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಶ್ರೀನಿವಾಸುಲು ಅವರು, ಜು. 1 ರಿಂದ ರಾಜ್ಯದಲ್ಲೂ ಕಟ್ಟುನಿಟ್ಟಾಗಿ ಜಾರಿ ಮಾಡ ಲಾಗುವುದು ಎಂದಿದ್ದಾರೆ.




