ಕುರ್ಲಾ ಪ್ರದೇಶದ 4 ಅಂತಸ್ತಿನ ಕಟ್ಟಡ ಕುಸಿತ
ಮುಂಬೈ: ಇಲ್ಲಿನ ಕುರ್ಲಾ ಪ್ರದೇಶದ 4 ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಕನಿಷ್ಠ 8 ಮಂದಿ ಗಾಯಗೊಂಡಿರುವುದಾಗಿ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಯಕ್ ನಗರ ಸೊಸೈಟಿಯಲ್ಲಿರುವ ಕಟ್ಟಡದ ಒಂದು ಭಾಗ ಮಧ್ಯರಾತ್ರಿಯ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳನ್ನು ಸಮೀಪದ ರಾಜವಾಡಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಬದುಕುಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಅವಶೇಷಗಳಡಿ ಇನ್ನೂ 20-25 ಮಂದಿ ಸಿಲುಕಿರುವ ಸಾಧ್ಯತೆ ಇದೆ ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ಟ್ವೀಟ್ ಮಾಡಿದೆ.





