ಫಾಕ್ಟ್ ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮುಹಮ್ಮದ್ ಜುಬೈರ್ ಬಂಧನ
ಹೊಸದಿಲ್ಲಿ: ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಗಲಭೆಗಳಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಫಾಕ್ಟ್ ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್ ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ದೆಹಲಿ ಪೊಲೀಸರನ್ನು ಟ್ವಿಟರ್‌ನಲ್ಲಿ ಟ್ಯಾಗ್ ಮಾಡಿದ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಜುಬೈರ್ ನನ್ನು ಬಂಧಿಸಲಾಗಿದೆ.
ಜುಬೈರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಮತ್ತು 295A (ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.