November 21, 2024

ಬಹುಭಾಷಾ ನಟಿ ಮೀನಾ ಅವರ ಪತಿ ನಿಧನ

0

ಚೆನ್ನೈ: ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಬುಧವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು.

ತೀವ್ರ ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾ ಸಾಗರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಮೀನಾ 2009 ರಲ್ಲಿ ಬೆಂಗಳೂರಿನ ಮೂಲದ ಉದ್ಯಮಿ ವಿದ್ಯಾಸಾಗರ್ ಅವರನ್ನು ವಿವಾಹವಾಗಿದ್ದು , ಇವರಿಗೆ 11 ವರ್ಷದ ನೈನಿಕಾ ಎಂಬ ಮಗಳಿದ್ದಾಳೆ.

ಮೀನಾ ಅವರು ಬಾಲ ಕಲಾವಿದೆಯಾಗಿ ಚಲನಚಿತ್ರಗಳಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದು, 90 ರ ದಶಕದಲ್ಲಿ ಮತ್ತು 2000 ರ ದಶಕದ ಉತ್ತರಾರ್ಧದಲ್ಲಿ ಪ್ರಮುಖ ಅತಿ ಹೆಚ್ಚು ಬೇಡಿಕೆ ಇರುವ ನಟಿಯರಲ್ಲಿ ಒಬ್ಬರಾಗಿದ್ದರು.

ಅವರು ದಕ್ಷಿಣ ಭಾರತದ ಎಲ್ಲಾ ಸೂಪರ್‌ಸ್ಟಾರ್‌ಗಳೊಂದಿಗೆ ನಟಿಸಿದ್ದಾರೆ. ತಾಯಿಯ ಹಾದಿಯನ್ನು ಅನುಸರಿಸುತ್ತಿರುವ ನೈನಿಕಾ ‘ತೇರಿ’ ಚಿತ್ರದಲ್ಲಿ ಬಾಲನಟಿಯಾಗಿ ತೆರೆಯ ಮೇಲೆ ಪಾದಾರ್ಪಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!