ಮಂಗಳೂರು : ಶಾಲೆಗೆ ಬರಲು ತೊಂದರೆಯಾಗುವ ಪ್ರದೇಶದ ಮಕ್ಕಳಿಗೆ ರಜೆ – ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ
ದ.ಕ ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಕಾರ್ಯನಿರ್ವಹಿಸಬೇಕು. ಆದರೆ ಶಾಲೆಗೆ ಬರಲು ಅನಾನುಕೂಲವಾದ ಪ್ರದೇಶದ ಮಕ್ಕಳಿಗೆ ಈ ದಿನ ರಜೆ ಸಾರಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಸೂಚಿಸಿದ್ದಾರೆ
ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ. ತಾಲೂಕು ಮಟ್ಟದಲ್ಲಿ ಪರಿಸ್ಥಿತಿ ನೋಡಿಕೊಂಡು ತಹಶೀಲ್ದಾರ್ ಪರಿಸ್ಥಿತಿ ನಿಭಾಯಿಸಲು ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಸೂಚಿಸಿದ್ದಾರೆ






