ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಧಾರಾಕಾರ ಮಳೆ:ತಗ್ಗು ಪ್ರದೇಶಗಳು ಜಲಾವೃತ್ತ,
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಬುಧವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತ್ತಗೊಂಡಿದೆ.
ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ದ.ಕ. ಜಿಲ್ಲೆಯಲ್ಲಿ ಈಗಗಲೇ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಸ್ಮಾರ್ಟ್ ಸಿಟಿ ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ನಗರದ ಹಲವು ಕಡೆಗಳಲ್ಲೂ ಇಂತಹ ದೃಶ್ಯ ಕಂಡು ಬಂದಿವೆ ಎಂದು ಸ್ಥಳೀಯರು ದೂರಿದ್ದಾರೆ.
ಮಂಗಳೂರು ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಕಾರ್ಯ ನಿರ್ವಹಿಸಬೇಕು. ಮಕ್ಕಳು ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ನೀಡಬೇಕು ಎಂದು ದ.ಕ. ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.