ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಟ್ವಿಟರ್ ಖಾತೆ ಹ್ಯಾಕ್
ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಚಿವರು ಮಾಹಿತಿ ನೀಡಿದ್ದು, ನನ್ನ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದ್ದು, ಈಗಾಗಲೇ ಪರಿಶೀಲನೆಗೆ ಮನವಿ ಮಾಡಲಾಗಿದೆ. ನಾನು ಅಧಿಕೃತವಾಗಿ ಘೋಷಣೆ ಮಾಡುವವರೆಗೆ ಟ್ವಿಟರ್ ಮೂಲಕ ಬರುವ ಯಾವುದೇ ಸಂದೇಶ ಪರಿಗಣಿಸಬಾರದೆಂದು ಮನವಿ ಮಾಡಿದ್ದಾರೆ.