ಟೈಲರ್ ಹತ್ಯೆ ಖಂಡಿಸಿ ಸಂಘಪರಿವಾರದಿಂದ ಪ್ರತಿಭಟನೆ: ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ
ರಾಜಸ್ಥಾನ: ಉದಯಪುರದಲ್ಲಿ ಹಾಡಹಗಲೇ ಟೈಲರ್ ಕನ್ನಯ್ಯಲಾಲ್ ಹತ್ಯೆಗೈದ ಘಟನೆಯನ್ನು ಖಂಡಿಸಿ ಗುರುವಾರ ಸಂಘಪರಿವಾರದ ಸಾವಿರಾರು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಈ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿರುವುದಾಗಿ ವರದಿ ತಿಳಿಸಿದೆ.
ಉದಯಪುರದಲ್ಲಿ ವಿವಿಧ ಹಿಂದೂ ಸಂಘಟನೆಗಳ ಸಾವಿರಾರು ಮಂದಿ ನ್ಯಾಯ ಕೊಡಿಸಿ ಎಂದು ಘೋಷಣೆ ಕೂಗುತ್ತ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಭೀಬತ್ಸ ಘಟನೆ ನಡೆದ ಸ್ಥಳದತ್ತ ಪ್ರತಿಭಟನಾಕಾರರು ತೆರಳಿದ ಸಂದರ್ಭದಲ್ಲಿ ಘರ್ಷಣೆ ನಡೆದಿದ್ದು, ಪೊಲೀಸರು ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿರುವುದಾಗಿ ವರದಿ ವಿವರಿಸಿದೆ. ಪರಿಸ್ಥಿತಿ ನಿಯಂತ್ರಣದಲ್ಲಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.