ಬಂಟ್ವಾಳ: ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ, ಇಬ್ಬರು ಆರೋಪಿಗಳ ಬಂಧನ
ಬಂಟ್ವಾಳ : ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್‌ಐ.ಅವಿನಾಶ್ ನೇತ್ರತ್ವದ ತಂಡ ದಾಳಿ ನಡೆಸಿ ಅಪ್ಪ ಮಗ ಇಬ್ಬರು ಆರೋಪಿಗಳನ್ನು ಬಂದಿಸಿ, ಸ್ಥಳದಲ್ಲಿದ್ದ ಸಾವಿರಾರು ರೂ ಮೌಲ್ಯದ ಮಾಂಸವನ್ನು ವಶಕ್ಕೆ ಪಡೆದ ಘಟನೆ ಜುಲೈ 1 ರ ಶುಕ್ರವಾರ ಮುಂಜಾನೆ ವೇಳೆನಡೆದಿದೆ.
ಗೋಳ್ತಮಜಲು ನಿವಾಸಿಗಳಾದ ಮಹಮ್ಮದ್ ಮತ್ತು ಸಾಧಿಕ್ ಬಂಧಿತ ಆರೋಪಿಗಳು.
ಗೋಳ್ತಮಜಲು ಮಹಮ್ಮದ್ ಎಂಬವರ ಮನೆಯಲ್ಲಿ ದನಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಬಗ್ಗೆ ಸ್ಥಳೀಯ ರಿಂದ ಮಾಹಿತಿ ಲಭ್ಯವಾಗಿತ್ತು.
ಕದ್ದು ತಂದ ದನಗಳನ್ನು ಇವರ ಮನೆಯಲ್ಲಿ ವದೆ ಮಾಡಲಾಗುತ್ತಿತ್ತು, ಅ ಬಳಿಕ ಮಾಂಸಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಪೋಲಿಸರಿಗೆ ಲಭ್ಯವಾಗಿತ್ತು.
ಈ ಹಿನ್ನೆಲೆಯಲ್ಲಿ ಎಸ್ ಐ.ಅವಿನಾಶ್ ನೇತ್ರತ್ವದ ನಗರ ಠಾಣಾ ಪೋಲೀಸರ ತಂಡ ಮುಂಜಾವಿನ ವೇಳೆ ದಾಳಿ ನಡೆಸಿ, ಮಾಂಸ ಸಹಿತ ಆರೋಪಿಗಳು ಪರಾರಿಯಾಗದಂತೆ ಬಂಧಿಸಿದ್ದಾರೆ.




