March 24, 2026

ಏಕನಾಥ್ ಶಿಂಧೆಯನ್ನು ಶಿವಸೇನೆ ಪಕ್ಷದ ಎಲ್ಲಾ ಹುದ್ದೆಗಳಿಂದ ಉಚ್ಚಾಟನೆ ಮಾಡಿದ ಉದ್ಧವ್ ಠಾಕ್ರೆ

0
image_editor_output_image833600713-1656739365230.jpg

ಮುಂಬೈ: ಬಿಜೆಪಿ ಬೆಂಬಲದೊಂದಿಗೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಅವರನ್ನು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಶುಕ್ರವಾರ ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದು ಹಾಕಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಕ್ಕಾಗಿ ಶಿಂಧೆ ಅವರನ್ನು ಪದಚ್ಯುತಗೊಳಿಸಲಾಗಿದೆ ಎಂದು ಶಿವಸೇನೆ ಹೇಳಿಕೆಯಲ್ಲಿ ತಿಳಿಸಿದೆ.

ಶಿಂಧೆ ಅವರು ಪಕ್ಷದ ಸದಸ್ಯತ್ವವನ್ನೂ ತ್ಯಜಿಸಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಗುರುವಾರ, ಏಕನಾಥ್ ಶಿಂಧೆ ಮಹಾರಾಷ್ಟ್ರದ 20 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯ ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

Leave a Reply

Your email address will not be published. Required fields are marked *

error: Content is protected !!