March 26, 2026

ಕಮರಿಗೆ ಉರುಳಿ ಬಿದ್ದ ಖಾಸಗಿ ಬಸ್‌: ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಮೃತ್ಯು

0
image_editor_output_image-1791223882-1656911899214.jpg

ಕುಲ್ಲು: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್‌ವೊಂದು ಕಮರಿಗೆ ಉರುಳಿ ಬಿದ್ದಿದ್ದು, ಶಾಲಾ ಮಕ್ಕಳೂ ಸೇರಿದಂತೆ 16 ಜನರು ಮೃತಪಟ್ಟಿದ್ದಾರೆ.

‘ಸಾಯಿಂಜ್‌ಗೆ ತೆರಳುತ್ತಿದ್ದ ಬಸ್ ಬೆಳಿಗ್ಗೆ 8.30ರ ಸುಮಾರಿಗೆ ಜಂಗ್ಲಾ ಗ್ರಾಮದ ಬಳಿ ಕಮರಿಗೆ ಬಿದ್ದಿದೆ’ ಎಂದು ಕುಲ್ಲು ಜಿಲ್ಲಾಧಿಕಾರಿ ಅಶುತೋಷ್ ಗರ್ಗ್ ತಿಳಿಸಿದ್ದಾರೆ.

ಜಿಲ್ಲೆಯ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!