ಪುತ್ತೂರು: ಬೈಕ್, ಮಾರುತಿ ಓಮ್ನಿ ನಡುವೆ ಢಿಕ್ಕಿ, ಓರ್ವ ಸಾವು
ಪುತ್ತೂರು: ಪುತ್ತೂರು ತಾಲೂಕಿನ ಕುಂಬ್ರ ಎಂಬಲ್ಲಿ ಬೆಂಗಳೂರಿಗೆ ಹೊರಟ ಮಗನನ್ನು ಬಸ್‌ಗೆ ಬಿಡಲು ತೆರಳುತ್ತಿರುವ ವೇಳೆ ಬೈಕ್ ಮಾರುತಿ ಓಮ್ನಿ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಕುಂಬ್ರ ಪಂಜಿಗುಡ್ಡೆ ನಿವಾಸಿ ರಘುನಾಥ ಶೆಟ್ಟಿ ಎಂದು ಗುರುತಿಸಲಾಗಿದೆ.
ರಘುರಾಮ ಶೆಟ್ಟಿ ಅವರು ಬೆಂಗಳೂರಿಗೆ ತೆರಳುತ್ತಿರುವ ಮಗನನ್ನು ಬಸ್ ಗೆ ಬಿಡಲು ಬೈಕ್ ನಲ್ಲಿ ಪುತ್ತೂರಿಗೆ ಮನೆಯಿಂದ ಬರುತ್ತಿದ್ದು, ಈ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಶೀನಪ್ಪ ಅವರ ಮಾರುತಿ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದೆ.
ಈ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




