March 26, 2026

2022ನೇ ಸಾಲಿನ ಮಿಸ್ ಇಂಡಿಯಾ ಕಿರೀಟ ಗೆದ್ದ ಉಡುಪಿಯ ಸಿನಿ ಶೆಟ್ಟಿ

0
image_editor_output_image1910812088-1656914755411.jpg

ಮುಂಬೈ: 2022ನೇ  ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಿಸಲಾಗಿದ್ದು, ಉಡುಪಿಯ ಇನ್ನಂಜೆಯ ಸಿನಿ ಶೆಟ್ಟಿ ಮಿಸ್ ಇಂಡಿಯಾ ಕಿರೀಟ ಗೆದ್ದಿದ್ದಾರೆ.

ಮಿಸ್ ಇಂಡಿಯಾ 2020 ತೆಲಂಗಾಣದ ಮಾನಸಾ ವಾರಣಾಸಿ ತನ್ನ ಉತ್ತರಾಧಿಕಾರಿ ಸಿನಿ ಶೆಟ್ಟಿಗೆ ಮಿಸ್ ಇಂಡಿಯಾ 2022 ಕಿರೀಟವನ್ನು ತೊಡಿಸಿದರು. ಈ ಕಾರ್ಯಕ್ರಮವು ಭಾನುವಾರ ಸಂಜೆ ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು.

ಇನ್ನಂಜೆ ಮೂಲದವರಾದ ಸಿನಿ ಶೆಟ್ಟಿ ಅವರು ಮುಂಬೈನಲ್ಲಿ ಜನಿಸಿದವರು. ಆದರೆ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಸಿನಿ ಶೆಟ್ಟಿ ಪ್ರಸ್ತುತ ಚಾರ್ಟರ್ಡ್ ಫೈನಾನ್ಷಿಯಲ್ ಅನಾಲಿಸ್ಟ್ (ಸಿಎಫ್‌ಎ) ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು ಈಗ ಪ್ರತಿಷ್ಠಿತ 71 ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!