164ರಲ್ಲಿ 99 ಮತಗಳ ಅಂತರದಲ್ಲಿ ವಿಶ್ವಾಸ ಗೆದ್ದ ನೂತನ ಸರಕಾರ: ಸಿಎಂ ಸ್ಥಾನ ಭದ್ರಪಡಿಸಿಕೊಂಡ ಏಕನಾಥ ಶಿಂಧೆ
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ವಿಶ್ವಾಸಮತ ಗಳಿಸುವಲ್ಲಿ ಯಶಸ್ವಿಯಾಗಿದ್ದು, ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.
164–99 ಮತಗಳ ಅಂತರದಲ್ಲಿ ಶಿಂಧೆ ಸರ್ಕಾರ ವಿಶ್ವಾಸ ಗೆದ್ದಿದೆ. 3 ಸದಸ್ಯರು ವಿಧಾನಸಭೆ ಅಧಿವೇಶನಕ್ಕೆ ಗೈರಾಗಿದ್ದರು.
ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಮಹಾವಿಕಾಸ ಆಘಾಡಿ ಸರ್ಕಾರದ ವಿರುದ್ಧ ಬಂಡೆದ್ದು, ಬಿಜೆಪಿಯೊಂದಿಗೆ ಸೇರಿ ಶಿಂಧೆ ಅವರು ಮುಖ್ಯಮಂತ್ರಿಯಾಗಿದ್ದರು. ಬಿಜೆಪಿಯ ದೇವೇಂದ್ರ ಫಡಣವೀಸ್ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ.
ಉದ್ಧವ್ ಠಾಕ್ರೆಯೊಂದಿಗೆ ಗುರುತಿಸಿಕೊಂಡಿದ್ದ ಮತ್ತೊಬ್ಬ ಶಾಸಕ, ಸಂತೋಶ್ ಬಂಗಾರ್ ಎಂಬುವವರೂ ಕೂಡ ಇಂದು ಶಿಂಧೆ ಬಣಕ್ಕೆ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಶಿಂಧೆ ಕಡೆಯ ಶಾಸಕರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.




