March 26, 2026

ಬಂಟ್ವಾಳ: ಯುವಕನನ್ನು ಕತ್ತಿಯಿಂದ ಕಡಿದು ಬರ್ಬರ ಹತ್ಯೆ:
ಗಾಂಜಾ ಗ್ಯಾಂಗ್ ನಿಂದ ಕೃತ್ಯ

0
image_editor_output_image279933154-1656990809482

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡ ಕತ್ತಿ ಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ.

ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ. ಅತನ ಸ್ನೇಹಿತ ನೌಫಾಲ್ ಮತ್ತು ಇನ್ನೊಬ್ಬನ ಹೆಸರು ಸಿಕ್ಕಿಲ್ಲ. ಇಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.

ಇವರು ಗಾಂಜ ಗಿರಾಕಿಗಳಾಗಿದ್ದು, ತಲಪಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಹೊಟೇಲ್ ಒಂದರ ಸಮೀಪದಲ್ಲಿ ರಾತ್ರಿ ಒಂದು ಗಂಟೆಯ ವೇಳೆ ಮಾತಿಗೆ ಮಾತು ಬೆಳೆದು ಗಾಂಜ ವಿಚಾರದಲ್ಲಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮೂವರು ಗಾಂಜ ಸೇವಕರು ಮತ್ತು ಮಾರಾಟಗಾರರು ಎಂಬ ಮಾತುಗಳು ಸ್ಥಳೀಯ ರಿಂದ ಹೇಳಲಾಗುತ್ತಿದ್ದು, ಇತ್ತೀಚಿಗೆ ಗಾಂಜಾ ವಿಚಾರದಲ್ಲಿ ಗಲಾಟೆಗಳು ನಡೆಯುವುದು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

ಪೋಲೀಸರು ಗಾಂಜಾ ವಿಚಾರದಲ್ಲಿ ಹೆಚ್ಚಿನ ಗಮನ ಹರಿಸಿ ಬಂಟ್ವಾಳ ದಲ್ಲಿ ಶಾಂತಿ ನೆಲೆಸಲು ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ. ಘಟನಾ ಸ್ಥಳಕ್ಕೆ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ, ಎಸ್.ಐ.ಅವಿನಾಶ್ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!