March 19, 2026

ಅನಂತಪುರದಲ್ಲಿ ಭೀಕರ ರಸ್ತೆ ಅಪಘಾತ:
6 ಮಂದಿ ಮಹಿಳೆಯರು ಸ್ಥಳದಲ್ಲಿಯೇ ಮೃತ್ಯು

0
image_editor_output_image1213266708-1636090758638.jpg

ಅನಂತಪುರ: ಆಂಧ್ರಪ್ರದೇಶದ ಅನಂತಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಮಂದಿ ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಭವಿಸಿದೆ.

ಅನಂತಪುರದ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಪಾಮಿಡಿ ಮಂಡಲದ ಬಳಿ ಕೃಷಿ ಕಾರ್ಮಿಕರನ್ನು ಹೊತ್ತು ಆಟೋವೊಂದು ಚಲಿಸುತ್ತಿತ್ತು. ಆಟೋದಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಈ ವೇಳೆ ಎದುರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಆಟೋಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 6 ಮಂದಿ ಮಹಿಳೆಯರು ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. ಘಟನೆಯಲ್ಲಿ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಗಾಯಗೊಂಡಿರುವ 7 ಮಂದಿಯಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!