March 26, 2026

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ: ಶಾಸಕ ಝಮೀರ್‌ ಅಹಮ್ಮದ್‌ ಖಾನ್‌ ನಿವಾಸಗಳ ಮೇಲೆ ಎಸಿಬಿ ದಾಳಿ

0
image_editor_output_image476438466-1656996777137.jpg

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಜೆಡ್‌. ಜಮೀರ್‌ ಅಹಮ್ಮದ್‌ ಖಾನ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ), ಮಂಗಳವಾರ ನಸುಕಿನಲ್ಲಿ ಐದು ಸ್ಥಳಗಳ ಮೇಲೆ ದಾಳಿಮಾಡಿ, ಶೋಧ ನಡೆಸುತ್ತಿದೆ.

ಜಾರಿ ನಿರ್ದೇಶನಾಲಯ ನೀಡಿರುವ ವರದಿ ಆಧರಿಸಿ ಜಮೀರ್‌ ಅಹಮ್ಮದ್‌ ವಿರುದ್ಧ ಎಸಿಬಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿದೆ.

ತನಿಖೆಯ ಭಾಗವಾಗಿ ನಗರದ ಐದು ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಕಂಟೋನ್ಮೆಂಟ್‌ ರೈಲ್ವೆ ನಿಲ್ದಾಣದ ಸಮೀಪ ಇರುವ ಜಮೀರ್‌ ಅಹಮ್ಮದ್‌ ಅವರ ಮನೆ, ಸಿಲ್ವರ್‌ ಓಕ್‌ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌, ಸದಾಶಿವನಗರದಲ್ಲಿರುವ ಅತಿಥಿಗೃಹ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್‌ ಟ್ರಾವೆಲ್ಸ್‌ ಕಚೇರಿಯಲ್ಲಿ ಶೋಧ ನಡೆಯುತ್ತಿದೆ. ಎಸಿಬಿ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

Leave a Reply

Your email address will not be published. Required fields are marked *

error: Content is protected !!