March 26, 2026

ವಿಟ್ಲ: ಕುಡ್ತಮುಗೇರು ರಸ್ತೆ ಸಂಪೂರ್ಣ ಜಲಾವೃತ: ರಸ್ತೆ ಸಂಚಾರ ಸ್ಥಗಿತ

0
IMG-20220705-WA0033.jpg

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ರಸ್ತೆ ಜಲಾವೃತವಾದ ಘಟನೆ ರಂದು ನಡೆದಿದೆ‌.

ನೀರಿನ ಮಟ್ಟ ಏರಿಕೆಯಾಗುತ್ತಿರು ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ

ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮದ
ಕುಡ್ತಮುಗೇರು ಎಂಬಲ್ಲಿ ರಸ್ತೆ ಬದಿಯಲ್ಲಿ ಹರಿಯುತ್ತಿರುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ರಸ್ತೆ ಜಲಾವೃತವಾಗಿದೆ. ಇದರಿಂದಾಗಿ ಈ ದಾರಿಯಾಗಿ ವಾಹನ ಸಂಚಾರಕ್ಕೆ ತೊಡಕಾಗಿದ್ದು, ವಾಹನಗಳು ಸುತ್ತಿ ಬಳಸಿ ಪ್ರಯಾಣ ಬೆಳೆಸುವಂತಾಗಿದೆ.

ಬೆಳಗ್ಗಿನಿಂದಲೇ ನೀರಿನ ಮಟ್ಟ ಏರುತ್ತಿದ್ದು, ಅಲ್ಪ ಹೊತ್ತು ಇಳಿಮುಖವಾಗಿತ್ತು. ಇದೀಗ ಮತ್ತೆ ಏರಿಕೆ ಕಂಡಿದ್ದು ನೀರು ರಸ್ತೆಗೆ ಬಂದಿದೆ‌. ಇದೀಗ ರಸ್ತೆಯ ಎರಡೂ ಕಡೆಗಳಲ್ಲಿ ಸ್ಥಳೀಯ ನಾಗರೀಕರು ಕಾವಲು ಕಾಯುತ್ತಿದ್ದು ಅಪಾಯಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.ಕುಡ್ತಮುಗೇರು ಟಾಪ್ ಆ್ಯಂಡ್ ಟಾಪ್ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!