August 25, 2026

ಸಾರ್ವಜನಿಕ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆ: ಗ್ರಾಮಸ್ಥರ ಆತಂಕ

0
image_editor_output_image-1721719970-1657000836839.jpg

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದ್ದು, ಮಂಗಳವಾರ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆಯಾಗಿದ್ದಾರೆ.

ಸುಮಾರು 30 ವರ್ಷದ ಯುವಕನನ್ನು ಶಿರಚ್ಛೇದ ಮಾಡಿ ಕೊಲೆಗೈದು ರುಂಡ ಬೇರ್ಪಡಿಸಿ ದೇಹವನ್ನು ದುಷ್ಕರ್ಮಿಗಳು ಬಾವಿಯಲ್ಲಿ ಎಸೆದು ಹೋಗಿದ್ದಾರೆ. ಬೆಳಗ್ಗೆ ಹೊಲಕ್ಕೆ ಹೋದ ಗ್ರಾಮಸ್ಥರು ಇದನ್ನು ಕಂಡು ಆತಂಕಗೊಂಡಿದ್ದಾರೆ.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುನೀಲ ಅಷ್ಟೇಕರ ಎಂಬವರ ಹೊಲದ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿದೆ. ಕೂಡಲೇ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲಿಸಿದರು. ಸುತ್ತಲೂ ಎಲ್ಲಾದರೂ ರುಂಡ ಎಸೆಯಲಾಗಿದೆಯೇ ಎಂಬುದರ ಬಗ್ಗೆ ಪತ್ತೆ ಹಚ್ಚುವ ಕಾರ್ಯ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!