ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ
ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಇಲ್ಲಿನ ಉಣಕಲ್ಲ ಕೆರೆ ಬಳಿಯ ಖಾಸಗಿ ಹೋಟೆಲ್ ನ ಸ್ವಾಗತಕಾರರ ಕೌಂಟರ್ ಬಳಿ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಗುರೂಜಿ ಮೇಲೆ ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಚಂದ್ರಶೇಖರ್ ಗುರೂಜಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.




